ಯಾವುದೇ ಫಲಾಪೇಕ್ಷೆ ಬಯಸದೆ ಗೋಕುಲದಾಸರ ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಅವರ ಸೇವೆಗೆ ತಕ್ಕ ಪ್ರತಿಫಲ ದೊರೆತ್ತಿರುವುದು ಸಂತೋಷ ನೀಡಿದೆ ಎಂದು
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಹೇಳಿದ್ದಾರೆ.
ಅವರು ಡಿ.28ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆದ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಸಿ ಕೆ.ಗೋಕುಲ್‌ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಅಭಿನಂದನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಮಾಜಿ ಶಾಸಕ ಎಸ್.ಅಂಗಾರ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕೆ ವಿ ಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ ವಿ ಲೀಲಾಧರ್, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,ಎನ್.ಜಯಪ್ರಕಾಶ್ ರೈ,ಎಸ್.ಸಂಶುದ್ದೀನ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಎಂ.ಬಿ ಸದಾಶಿವ ಸಮಿತಿಯ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ ಕಲ್ಮಡ್ಕ, ಕೋಶಾಧಿಕಾರಿ ಬೂಡು ರಾಧಾಕೃಷ್ಞ ರೈ ವೇದಿಕೆಯಲ್ಲಿದ್ದರು.
ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. .ಸನ್ಮಾನ ಸ್ವೀಕರಿಸಿದ ಗೋಕಲ್ ದಾಸ್ ಮಾತನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನಾರಾಯಣ್ ಕೇಕಡ್ಕ ಸ್ವಾಗತಿಸಿ, ಭವಾನಿ ಶಂಕರ ಕಲ್ಮಡ್ಕ ವಂದಿಸಿದರು.ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.