ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ದ ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್ ಪೇರಡ್ಕ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳು ಗೂನಡ್ಕ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ, ಸಿ. ಕೆ. ಲೆಜೆಂಡ್ಸ್ ಕಲ್ಲುಗುಂಡಿ, ತಾಲೂಕು ಮುಸ್ಲಿಂ ಫೆಡರೇಷನ್ ಹಾಗು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸುಳ್ಯ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ ಜ.5ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯಲಿದೆ ಎಂದು
ಧಪ್ ಸ್ಪರ್ಧೆಯ ಸಂಘಟನಾ ಸಮಿತಿಯ ಪದಾಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪೇರಡ್ಕ ಜಮಾಅತ್‌ನ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಮಾತನಾಡಿ ‘ ದಫ್ ಕಲೆ ಈಗ ಗ್ರಾಮೀಣ ಭಾಗದಲ್ಲಿ ಜನಪ್ರಿಯವಾಗುತ್ತಿದ್ದು ಹೆಚ್ಚು ಮಂದಿ ದಫ್ ಕಲಿಯಲು ಆಸಕ್ತಿ ತೋರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಹಾಗೂ ತಾಲೂಕು ಮಟ್ಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಹಿಯ್ಯದ್ದೀನ್ ರಿಪಾಯಿ ದಫ್ ಅಸೋಸಿಯೇಶನ್‌ನ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ಮಾತನಾಡಿ ‘ ದಫ್ ಕಲೆ ನಶಿಸಿ ಹೋಗುತ್ತಿದೆ ಇದನ್ನು ಪ್ರೋತ್ಸಾಹಿಸಲು ಮತ್ತು ಕಲೆಯನ್ನು ಮುಂದೆ ಉಳಿಸಲು ದಫ್ ಸ್ಪರ್ಧೆ ಏರ್ಪಡಿಸಲಾಗಿದೆ.
ಸಂಜೆ 4 ಗಂಟೆಗೆ ಗೂನಡ್ಕ ಪೇಟೆಯಲ್ಲಿ ಆಕರ್ಷಕ ದಫ್ ತಂಡಗಳ ಮೆರವಣಿಗೆ ನಡೆಯಲಿದೆ.ಮೆರವಣಿಗೆಯಲ್ಲಿ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಇರಲಿದೆ ಎಂದು ಹೇಳಿದರು. ಸಂಜೆ 6 ಗಂಟೆಗೆ ತಾಲೂಕು ಮಟ್ಟದ ಸ್ಪರ್ಧೆ ಹಾಗೂ 8 ಗಂಟೆಯ ಬಳಿಕ ರಾಜ್ಯ ಮಟ್ಟದ ಸ್ಪರ್ಧೆಗಳು ಆರಂಭಗೊಳ್ಳಲಿವೆ ಎಂದು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ.ಹನೀಪ್ , ಸುಳ್ಯ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್, ನಾಮ ನಿರ್ದೇಶಿತ ಸದಸ್ಯ ಸಿದ್ದಿಕ್ ಕೊಕ್ಕೊ, ಖಲಂದರ್ ಎಲಿಮಲೆ, ಉಮ್ಮರ್ ತಾಜ್ ರಶೀದ್ ಜಟ್ಟಿಪಳ್ಳ ಉಪಸ್ಥಿತರಿದ್ದರು.
ಜ.5ಕ್ಕೆ ಗೂನಡ್ಕದಲ್ಲಿ ತಾಲೂಕು ಮಟ್ಟದ ಹಾಗೂ ರಾಜ್ಯ ರಾಜ್ಯಮಟ್ಟದ ದಫ್ ಸ್ಪರ್ಧೆ
