ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ವೀರ ಯೋಧ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ದಿವಿನ್( 28 ವರ್ಷ) ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ
ಪಳಂಗೋಟಿ ದಿವಿನ್ ರವರಿಗೆ ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು.ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.ತಂದೆ ತಾಯಿಗೆ ಏಕೈಕ ಮಗನಾಗಿದ್ದ ಧಿವಿನ್ 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿ ಇದ್ದ 4 ಸೈನಿಕರು ಸ್ಥಳದಲ್ಲಿ ಹುತಾತ್ಮರಾಗಿದ್ದರು.