ಸಂಪಾಜೆ ಗ್ರಾಮದ ಗಡಿಕಲ್ಲು ಬಳಿ ಕಾರುಗಳ ನಡುವೆ ಭೀಕರ ಅಪಘಾತ ನಡೆದು ಕಾರು ಸವಾರರಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರೊಂದು ಸಂಪಾಜೆ ಗಡಿಕಲ್ಲು ಎಂಬಲ್ಲಿ ಇನ್ನೊಂದು ಕಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಎರಡು ಕಾರುಗಳು ಜಖಂಗೊಂಡಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.