ಹಳೇಹುಬ್ಬಳ್ಳಿ ಘೋಡ್ಕೆ ಪ್ಲಾಟ್‌ನಲ್ಲಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸೆರೆ ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಓರ್ವನ ಕಾಲಿಗೆ ಪೊಲೀಸರು ಗುಂಡು ಹೊಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ
ಈತನು ಕ್ಷುಲಕ ವಿಷಯವಾಗಿ ಸೋಮವಾರ ರಾತ್ರಿ ಹಳೇಹುಬ್ಬಳ್ಳಿ ಆನಂದನಗರ ರಸ್ತೆ ಘೋಡ್ಕೆ ಪ್ಲಾಟ್‌ನ ತಬ್ಲಿಕ್ ಮಸೀದಿ ಬಳಿ ಅದೇ ಪ್ರದೇಶದ ಸಮೀರ ಶೇಖ್ (18) ಹಾಗೂ ಈತನ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬುವರಿಗೆ ಚಾಕುವಿನಿಂದ ತಲೆಮರೆಸಿಕೊಂಡಿದ್ದ.ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆಪಾದಿತನನ್ನು ವಶಕ್ಕೆ ಪಡೆಯಲು ಹೋದಾಗ ಅವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸದ್ಯ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.