December 2024

ನಾಪತ್ತೆಯಾಗಿದ್ದ ಸಂದೀಪ್ ಗೌಡನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್‌ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸಮೀಪ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.ಆತನನ್ನು‌ ಅವನ ಮಿತ್ರ ನೆಟ್ಟಣ ನಿವಾಸಿ ಪ್ರತೀಕ್‌ ಎಂಬಾತನು ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.ಸಂದೀಪ್‌ ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ […]

ನಾಪತ್ತೆಯಾಗಿದ್ದ ಸಂದೀಪ್ ಗೌಡನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕೇರಳದಲ್ಲಿ ಭೀಕರ ಕಾರು ಬಸ್ ಅಪಘಾತ : ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ

ಕೇರಳ ರಾಜ್ಯದ ಆಲಪುಝ ಜಿಲ್ಲೆಯ ಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳು ಸಂಚರಿಸುತ್ತಿದ್ದ ಟವೇರಾ ಕಾರ್ ಹಾಗೂ ಬಸ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಐದು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಪ್ರಥಮ ವರ್ಷ ಮೆಡಿಕಲ್ ಅಧ್ಯಾಯನ ಮಾಡುತ್ತಿದ್ದ ವಿದ್ಯಾರ್ಥಿಗಳಾಗಿದ್ದು ಕಾರಿನಲ್ಲಿ 12 ವಿಧ್ಯಾರ್ಥಿಗಳು ಇದ್ದರು ಎನ್ನಲಾಗಿದೆ. 12 ವಿಧ್ಯಾರ್ಥಿಗಳ ಪೈಕಿ ಐವರು ಮೃತಪಟ್ಟಿರುವುದಾಗಿ ಸ್ಥಳೀಯ ಮೂಲಗಳು ವರದಿ ಮಾಡಿದೆ.ಇನ್ನುಳಿದ 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾಯಂಗುಳಂ ಕಡೆಯಿಂದ ಎರ್ನಾಕುಲಂ ಕಡೆಗೆ ಹೊರಟಿದ್ದ ಟವೆರಾ ಕಾರು,

ಕೇರಳದಲ್ಲಿ ಭೀಕರ ಕಾರು ಬಸ್ ಅಪಘಾತ : ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ Read More »

ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ

ರಾಜ್ಯ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ (ರಿ) ಚಿತ್ರದುರ್ಗ ಇವರು ಆಯೋಜಿಸಿದ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡಕೊಂಡಿದ್ದಾರೆ.ವಿಜೇತರಿಗೆ ಡಿಸೆಂಬರ್ 9ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಪ್ರಶಸ್ತಿ ನೀಡಲಾಗುವುದು.

ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ Read More »

ಭಾರೀ ಮಳೆ ಹಿನ್ನಲೆ ನಾಳೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಡಿ.3 ರಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಪೆ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನಲೆ ನಾಳೆ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸ್ಪೋಟಗೊಂಡ ಭಿನ್ನಮತ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ

ದ.ಕ ಜಿಲ್ಲಾ ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಜಿಲ್ಲೆಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್‌ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದೆ.ಕೆಲವು ದಿನಗಳ ಹಿಂದೆ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಗ್ರಾ ಪಂಚಾಯತ್‌ ಸದಸ್ಯರಿಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ನಿಗದಿಪಡಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲಾ

ಸ್ಪೋಟಗೊಂಡ ಭಿನ್ನಮತ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ Read More »

ಬ್ಯೂಟಿ ಪಾರ್ಲರ್ ಗೆ ತೆರಳಿದ ನವ ವಿವಾಹಿತೆ ಎಲ್ಲಿಗೆ ಹೋದಳು?

ನವವಿವಾಹಿತೆ ದಾವಣೆಗೆರೆ ಮೂಲದ ಚೆನ್ನಗಿರಿಯ ಮಂಗಳ ಯಾನೆ ಕಾವ್ಯಾ (28 ವರ್ಷ) ನವಂಬರ್ 20ರಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಪತಿ ಪತ್ನಿಯನ್ನು ಹುಡುಕಿಕೊಡುವಂತೆ ದೂರು ನೀಡಿದ್ದಾರೆ. ನ.7ರಂದು ಕಾವ್ಯಾ ವಿಕ್ರಂ ಮದುವೆಯಾಗಿದ್ದರು. ನ.20ರಂದು ಈಕೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋದವರು ಮನೆಗೆ ಬಾರದೆ ತವರು ಮನೆಗೆ ಹೋಗದೆ ನಿಗೂಡವಾಗಿ ನಾಪತ್ತೆಯಾಗಿದ್ದಾರೆ.

ಬ್ಯೂಟಿ ಪಾರ್ಲರ್ ಗೆ ತೆರಳಿದ ನವ ವಿವಾಹಿತೆ ಎಲ್ಲಿಗೆ ಹೋದಳು? Read More »

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ

ಭಾಷೆಯಲ್ಲಿ ಸಂಸ್ಕೃತಿ,ವ್ಯಕ್ತಿತ್ವ ಇದೆ.ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕೆಂದು ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ ಸದಾಶಿವ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಮಾಪನ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.

ಭಾಷೆಗೆ ಉತ್ತಮವಾದ ರೂಪುರೇಷೆಗಳನ್ನು ನೀಡಿ ಭಾಷೆಯನ್ನು ಉದ್ದೀಪನಗೊಳಿಸಬೇಕು : ಎಂ.ಬಿ ಸದಾಶಿವ Read More »

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ

ಶತಮಾನೋತ್ಸವದ ಹೊಸ್ತಿಲಲ್ಲಿರುವ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮತ್ತು ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮವು ದೇವಚಳ್ಳ ಶಾಲೆಯಲ್ಲಿ ನಡೆಯಿತು.ಎಸ್‌ ಡಿ ಯಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸಿದ್ದರು.ಹಿರಿಯರಾದ ನಿವೃತ್ತ ಶಿಕ್ಷಕ ಕೇಪಳಕಜೆ ಪುರುಷೋತ್ತಮ ಗೌಡ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶಾಲೆಯ ಯಶಸ್ಸು ವಿದ್ಯಾರ್ಜನೆ ಜ್ಞಾನಾರ್ಜನೆ ಇನ್ನಷ್ಟು ವಿಸ್ತರಿಸಲಿ ಎಂಬುದಾಗಿ ಶುಭಾಶಯ ಕೋರಿದರು. ಶತಮಾನೋತ್ಸವದ ಲೋಗೋ ವನ್ನು ದೇವಚಳ್ಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೀಲಾವತಿ ಸೇವಾಜೆ

ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ Read More »

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ,ಕಾರಣ ನಿಗೂಡ!

ಗುಜರಾತ್‌ನ ಸೂರತ್‌ನ ಅಲ್ತಾನಾ ವಾರ್ಡ್ ನಂ.30ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ‌.ದೀಪಿಕಾ ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ದೀಪಿಕಾ ಅವರ ಸಂಬಂಧಿಕರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಂಬಂಧಿಕರು ಒತ್ತಾಯಿಸಿದ್ದಾರೆ. ದೀಪಿಕಾ ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತೆಯಾಗಿ ಸಕ್ರಿಯರಾಗಿದ್ದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಿಕಾ ಪಟೇಲ್ ಆತ್ಮಹತ್ಯೆ,ಕಾರಣ ನಿಗೂಡ! Read More »

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ

ಅರೆಭಾಷೆ ನಮ್ಮ ಮನೆಭಾಷೆ.ಅರೆಭಾಷೆಯನ್ನು ನಮ್ಮ ಮಕ್ಕಳಿಗೆ ಕಲಿಸುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕೆಂದು ಸುಳ್ಯ ಗೌಡರ ಯುವ ಸೇವಾ ಸಂಘದ ಮಾಜಿ ಅಧ್ಯಕ್ಷ ಜಾ.ಕೆ ಸದಾನಂದ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಹಮ್ಮಿಕೊಂಡ ಅರೆಭಾಷೆ ಗಡಿನಾಡ ಉತ್ಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಅರೆಭಾಷೆಯನ್ನು ಮಕ್ಕಳಿಗೆ ಕಲಿಸಿ ಅರೆಭಾಷೆ ಉಳಿಸಿ ಬೆಳೆಸಿ : ಜಾ.ಕೆ ಸದಾನಂದ Read More »

error: Content is protected !!
Scroll to Top