December 2024

ಇಂದು ದ.ಕ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಅವರಿಗೆ ಸಾರ್ವಜನಿಕ‌ ಸನ್ಮಾನ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಗೋಕುಲ್‌ದಾಸ್ ಅಭಿನಂದನಾ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಡಿ.28ರಂದು ಶನಿವಾರ ಪೂ.10.30ರಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಕ್ರಷ್ಣ ಬೊಳ್ಳುರು ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಅವರು ಸಮಾರಂಭವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಹಿರಿಯ ಸಹಕಾರಿ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ […]

ಇಂದು ದ.ಕ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲದಾಸ್ ಅವರಿಗೆ ಸಾರ್ವಜನಿಕ‌ ಸನ್ಮಾನ Read More »

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸ : ಪ್ರೊ’ಕೃಷ್ಣ ಗೌಡ

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸವಾಗಿದೆ ಎಂದು ಮೈಸೂರು ಸಂತ ಪಿಲೋಮಿನ ಕಾಲೇಜಿನ‌ ನಿವೃತ್ತ ಪ್ರಾಂಶುಪಾಲ ಮತ್ತು ಖ್ಯಾತ ವಾಗ್ಮಿ ಕ್ರಷ್ಣೇ ಗೌಡ ಹೇಳಿದರು.ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ’ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ಯಲ್ಲಿ ಕೆವಿಜಿ ಸಾಧನಾಶ್ರೀ ಮತ್ತು ಯುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆವಿಜಿ ಸಂಸ್ಮರಣಾ ಭಾಷಣ ಮಾಡಿ ಅವರು ಮಾತನಾಡಿದರು. ಅವರು ಶೈಕ್ಷಣಿಕ ಕಾಂತ್ರಿ ಮಾಡುವ ಮೂಲಕ ಅದ್ಭುತವನ್ನು

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿ ಕ್ಷೇತ್ರದಲ್ಲಿ ಕೆವಿಜಿಯವರು ಮಾಡಿರುವ ಸಾಧನೆ ಶ್ರೇಷ್ಠ ಕೆಲಸ : ಪ್ರೊ’ಕೃಷ್ಣ ಗೌಡ Read More »

ಗಾಂಧಿನಗರ : ಗ್ರಾಹಕರ ದಿನಾಚರಣೆ ಕಾರ್ಯಕ್ರಮ

ವಿಶ್ವ ಗ್ರಾಹಕರ ದಿನದ ಅಂಗ ವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿನಗರ ಇಲ್ಲಿ ಇಂದು ಗ್ರಾಹಕರ ದಿನಾಚರಣೆ ಯನ್ನು ಆಚರಿಸಲಾಯಿತು. ಗ್ರಾಹಕ ಕ್ಲಬ್ ವತಿಯಿಂದ ಕಾರ್ಯಕ್ರಮ ವನ್ನು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಸ್. ಡಿ . ಎಂ. ಸಿ ಉಪಾಧ್ಯಕ್ಷ, ಚಿದಾನಂದ ಕಾಯರ್ತೋ ಡಿ ಉದ್ಘಾಟನೆ ಮಾಡಿದರು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಹಾಗೂ ಪ್ರೌಢ ಶಾಲಾ ಶಿಕ್ಷಕರು ಗ್ರಾಹಕ ಮೇಳದಲ್ಲಿ, ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ನೀಡಿದರು.. ಗ್ರಾಹಕ ಕ್ಲಬ್ ನೋಡಲ್ ಅಧಿಕಾರಿ ಚಿನ್ನಪ್ಪ ಗೌಡ. ಯಂ. ಇವರು ಕಾರ್ಯಕ್ರಮ

ಗಾಂಧಿನಗರ : ಗ್ರಾಹಕರ ದಿನಾಚರಣೆ ಕಾರ್ಯಕ್ರಮ Read More »

ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ

ಪಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ ) ಸುಳ್ಯ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪಂಜ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇಂದು ಪರಿವಾರ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು… ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀಮತಿ ನಳಿನಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷರು ವಹಿಸಿಕೊಂಡಿದ್ದರು.. ಡಾ! ದೇವಿಪ್ರಸಾದ್ ಕಾನತ್ತೂರು, (ಅಧ್ಯಕ್ಷರು, ವ್ಯವಸ್ಥಾಪನ

ತಾಲೂಕು ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ Read More »

ನಿವೃತ್ತ ಶಿಕ್ಷಕಿ ಪುಷ್ಪಾವತಿ ನಿಧನ

ಅರಂತೋಡು ಗ್ರಾಮದ ಕರಿಂಬಿ ಚಿನ್ನಪ್ಪ ಮಾಸ್ತರ್‌ರ ಪತ್ನಿ , ನಿವ್ರತ್ತ. ಶಿಕ್ಷಕಿ ಪುಷ್ಪಾವತಿ (68 )ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಪುಷ್ಪಾವತಿಯವರು ಪೆರುವಾಜೆ, ಗಾಂಧಿನಗರ, ತೊಡಿಕಾನ, ಸೋಣಂಗೇರಿ ಶಾಲೆಗಳಲ್ಲಿ ಶಿಕ್ಷಕಿ, ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತಿ, ಪುತ್ರ ಪ್ರಹ್ಲಾದ್ ಕೆ.ಸಿ., ಪುತ್ರಿ ಡಾ. ಪಲ್ಲವಿ ಪ್ರಶಾಂತ್ ತಂಟೆಪ್ಪಾಡಿ, ಸೊಸೆ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ನಿವೃತ್ತ ಶಿಕ್ಷಕಿ ಪುಷ್ಪಾವತಿ ನಿಧನ Read More »

ಮನೆ ಮುಂದೆ ಐದು ಚಿರತೆ ಪತ್ಯಕ್ಷ

ಕಾಸರಗೋಡಿನ ಮಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಚಿರತೆಗಳ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡಿ.25 ರಂದು ರಾತ್ರಿ ಇಲ್ಲಿನ ಮನೆಯೊಂದರ ಪರಿಸರದಲ್ಲಿ ಐದು ಚಿರತೆಗಳು ಗುಂಪಾಗಿ ಏಕಕಾಲದಲ್ಲಿ ಕಂಡು ಬಂದಿದೆ. ಮುಳಿಯಾರು ಪಯೋಲಾದ ಕಲೆಯಪ್ಪಾಡಿ ಕೃಷ್ಣನ್ ಅವರ ಮನೆ ಪರಿಸರದಲ್ಲಿ ಚಿರತೆಗಳು ಗುಂಪಾಗಿ ಕಾಣಿಸಿಕೊಂಡಿತು.ಮನೆಯವರು ಪಕ್ಕದ ದೈವ ಕೋಲ ಉತ್ಸವಕ್ಕೆ ಹೋಗಿದ್ದು, ಅಲ್ಲಿಂದ ರಾತ್ರಿ ಮನೆಗೆ ವಾಪಸಾಗುತ್ತಿದ್ದಾಗ ಮನೆ ಪರಿಸರದಲ್ಲಿ ಚಿರತೆಗಳ ಗುಂಪು ಕಂಡು ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೆಲವೇ ಹೊತ್ತಿನಲ್ಲಿ ಈ ಚಿರತೆಗಳು ಅಲ್ಲಿಂದ

ಮನೆ ಮುಂದೆ ಐದು ಚಿರತೆ ಪತ್ಯಕ್ಷ Read More »

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ, ಸಂಸ್ಮರಣೆ ಕಾರ್ಯಕ್ರಮ

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮರ ಸುಳ್ಯದ ಅಮರ ಶಿಲ್ಪಿ ಎಂದು ಖ್ಯಾತ ನಾಮರಾದ ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜನ್ಮ ದಿನಾಚರಣೆಯ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಕುರುಂಜಿಭಾಗ್‌ನ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಡಾ.ಕುರುಂಜಿಯವರ ಸಂಸ್ಮರಣೆ ಮಾಡಿ ಅವರ ಗುಣಗಾನ ಮಾಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಅವರು ಮಾತನಾಡಿಡಾ.ಕುರುಂಜಿ ವೆಂಕಟ್ರಮಣ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ, ಸಂಸ್ಮರಣೆ ಕಾರ್ಯಕ್ರಮ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ,ಶಾಲಾ ಕಾಲೇಜು ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್‌ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು, ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ,ಶಾಲಾ ಕಾಲೇಜು ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ ಭಾರತದ ಆಡಳಿತ ನಡೆಸಿದ್ದಾರೆ. ಆರ್ಥಿಕ ತಜ್ಞರಾಗಿಯೂ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್‌ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ Read More »

error: Content is protected !!
Scroll to Top