ಕಡಬ ತಾಲೂಕಿನ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬುಧವಾರದಿಂದ ಜ.೭ರ ವರೆಗೆ ನಡೆಯಲಿದ್ದು ಆ ಪ್ರಯುಕ್ತ ಕ್ಷೇತ್ರಕ್ಕೆ ಭಕ್ತರು ಬುಧವಾರ ಹಸುರು ಹೊರೆಕಾಣಿಕೆ ಸಮರ್ಪಿಸಿದರು.
ಬೆಳಗ್ಗೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನೆರವೇರಿಸಲಾಯಿತು. ಕ್ಷೇತ್ರಕ್ಕೆ ಭಕ್ತರು ಸಲ್ಲಿಸಿದ ಹೊರೆ ಕಾಣಿಕೆಯನ್ನು ಕ್ಷೇತ್ರಕ್ಕೆ ಮೆರವಣಿಗೆಯಲ್ಲಿ ತಂದು ಸಮರ್ಪಿಸಲಾಯಿತು. ಅಲೆಕ್ಕಾಡಿ ಮುಖ್ಯದ್ವಾರದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ವ್ಯವಸ್ಥಾಪನಾ ಸಮಿತಿ ಪದಾಕಾರಿಗಳು, ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಪದಾಽಕಾರಿಗಳು, ಸದಸ್ಯರು, ವಿವಿಧ ಸಮಿತಿಗಳ ಪದಾಕಾರಿಗಳು, ಸದಸ್ಯರು, ವಿವಿಧ ಸಂಘ-ಸAಸ್ಥೆಯವರು ಸೇರಿದಂತೆ ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಸಂಜೆ ಕ್ಷೇತ್ರಕ್ಕೆ ಆಗಮಿಸಿದ ತಂತ್ರಿಗಳಿಗೆ ಹಾಗೂ ಇತರ ಋತ್ವಿಜರಿಗೆ ಪೂರ್ಣಕುಂಭ ಸ್ವಾಗರ ಮಾಡಲಾಯಿತು. ಬಳಿಕ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯಾದಿ ಋತ್ವಿಗ್ವರಣ, ಪ್ರಾಸಾದ ಶುದ್ಧಿ, ಅಂಕುರಾರೋಪಣ, ರಕ್ಷೆÆÃಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ಜರುಗಿತು. ಬಳಿಕ ಕೇರ್ಪಡ ಶ್ರೀ ಮಹಿಷಮರ್ದಿನೀ ಭಜನಾ ಮಂಡಳಿಯವರಿAದ ಭಜನಾ ಕಾರ್ಯಕ್ರಮ ನಡೆಯಿತು.
ಜ.೨ರಂದು ಬೆಳಗ್ಗೆ ಗಂಟೆ ೫.೩೦ರಿಂದ ಉಷಃಪೂಜೆ, ಮಹಾಗಣಪತಿ ಹೊಮ, ಅಂಕುರಪೂಜೆ, ಚತುಃಶುದ್ಧಿ, ಧಾರೆ, ಅವಗಾಹ, ಪಂಚಕ ಬಿಂಬಶುದ್ಧಿ, ಖತನಾದಿ ಸ್ಥಳಶುದ್ಧಿ, ದ್ವಾರ ಪ್ರಾಯಶ್ಚಿತ ಹೋಮಗಳು, ಮಧ್ಯಾಹ್ನ ೧೨ಕ್ಕೆ ಪ್ರಸಾದ ವಿತರಣೆ, ಹೋಮಗಳ ಕಲಾಶಾಭೀಷೇಕ, ಮಹಾಪೂಜೆ, ಸಂಜೆ ೫.೩೦ರಿಂದ ದೀಪಾರಾಧನೆ, ಅಂಕುರಪೂಜೆ, ಕುಂಡಶುದ್ಧಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ೬ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕಾಣಿಯೂರು ರಾಮತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಶ್ರೀಪಾದರು ಆಶೀರ್ವಚನ ನೀಡುವರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು. ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ ೯ರಿಂದ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಹರಿ ಕಥಾ ಕಾಲಕ್ಷೇಪ, ಮ್ಯಾಜಿಕ್ ಶೋ, ಮಿಮಿಕ್ರಿ ಮತ್ತು ಜಗ್ಲಿಂಗ್ ಶೋ ನಡೆಯಲಿದೆ.
ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನಬ್ರಹ್ಮಕಲಶೋತ್ಸವ ಅಂಗವಾಗಿ ಭಕ್ತರಿಂದ ಹಸುರು ಹೊರೆಕಾಣಿಕೆ ಸಮರ್ಪಣೆ





















































