ಪ್ರೀತಿಯ ಹೆಸರಲ್ಲಿ ಕಾಲೇಜುವೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ನಾಟಕವಾಡಿ ಕುಂಬ್ರಾದ ಬಾಡಿಗೆ ರೂಮಿಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದಲ್ಲದೇ ಅದನ್ನ ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನ ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಪ್ರವೀಣ್ ಪೂಜಾರಿ ಬಂಧಿತ ಆರೋಪಿ. ಬಾಲಕಿ ನೀಡಿದ ದೂರಿನ ಆಧಾರದ ಪೊಲೀಸರು ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.