ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget Ad Widget . Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ಮೂರು ದಿನಗಳ ವಸಂತ ಸಂಭ್ರಮ ಕಾರ್ಯಕ್ರಮಕ್ಕೆ ಜ.03 ರಂದು ಕುಂಜಾಡಿ ನಾರಾಯಣ ರೈ ವೇದಿಕೆಯಲ್ಲಿ ಚಾಲನೆ ನೀಡಲಾಯಿತು.

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಡ ವ್ಯಕ್ತಿಯಾದ ನನ್ನನ್ನು ಗುರುತಿಸಿ ಪದ್ಮಶ್ರಿ ಪುರಸ್ಕಾರ ನೀಡಿದ್ದಾರೆ ಇದಕ್ಕೆ ಕಾರಣರಾದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ಮೋದಿಯವರಿಗೆ ನಾ‌ನು ಚಿರರುಣಿ.ಮಾದ್ಯಮದವರಿಲ್ಲದಿದ್ದರೆ ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ.ಅದರಲ್ಲಿ ಮುಖ್ಯವಾಗಿ ಹೊಸದಿಂಗತ ಪತ್ರಿಕೆಯಲ್ಲಿ ನನ್ನ ಬಗ್ಗೆ ಬರೆಯಲಾಗಿತ್ತು.ನನ್ನದು ಏನು ಸಾಧನೆ ಇಲ್ಲ ನಿಮ್ಮಂತ ಹಿರಿಯ ವ್ಯಕ್ತಿಗಳ ಆಶೀರ್ವಾದ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಸಭಾಧ್ಯಕ್ಷತೆ ವಹಿಸಿದ್ದರು. ಮಾತನಾಡಿದ ಅವರು ಬೆಳ್ಳಾರೆ ಕೆಪಿಎಸ್ ನಲ್ಲಿ ವಸಂತ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದು ಸಂತೋಷ ತರುತ್ರಿದೆ. ಹಲವು ಜನರ ಕೊಡುಗೆಗಳಿಂದ ಶಿಕ್ಷಣ ಸಂಸ್ಥೆ ವೈಭವದ ಕಡೆ ಸಾಗುತ್ತಿದೆ ಎಂದು ಹೇಳಿದರು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರನ್ನು ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಒಸಾಟ್ ಸಂಸ್ಥೆಯ ಅಮೇರಿಕ ಅಧ್ಯಕ್ಷ ಬಿ.ವಿ.ಜಗದೀಶ,ಭಾರತೀಯ ಅಧ್ಯಕ್ಷ ವಾದಿರಾಜ ಭಟ್,ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ರಾವ್, ಪ್ರಾಜೆಕ್ಟ್ ಮೆನೇಜರ್ ಕಿಶೋರ್ ಕುಮಾ‌ರ್ ಅವರನ್ನು ಗೌರವಿಸಲಾಯಿತು.
ವಸಂತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ಒಸಾಟ್ ಸಂಸ್ಥೆಯ ಚೆಯರ್ ಮೆನ್ ಜಗದೀಶ್,ವಸಂತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಚಾಲಕ ಎಸ್.ಎನ್.ಮನ್ಮಥ, ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ .ರೈ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್,ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್, ರೈ, ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು,ಚಂದ್ರಶೇಖರ ಪನ್ನೆವಿಠಲದಾಸ್ ಎನ್‌.ಎಸ್‌.ಡಿ,ವಸಂತ ಸಂಭ್ರಮ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾ‌ರ್ ರೈ ಪನ್ನೆ, ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ವಿದ್ಯಾರ್ಥಿ ನಾಯಕರಾದ ಧನುಷ್,ಅಮೃತ್ ಎಚ್‌.ಕೆ,ದೀಕ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲರಾದ ಉಮಾಕುಮಾರಿ ಸ್ವಾಗತಿಸಿ, ವಿದ್ಯಾರ್ಥಿಗಳು ಪ್ರಾರ್ಥಿಸಿ,ಪ್ರಾಂಶುಪಾಲ ಜನಾರ್ಧನ ಕೆ.ಎನ್‌.ವರದಿ ಮಂಡಿಸಿದರು.ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ.ವಂದಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top