ಸುಳ್ಯ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ. ಕಿಟಕಿಯ ಗ್ಲಾಸ್ ಸರಿಸಿ ಫೋಟೋವನ್ನು ಕ್ಲಿಕ್ಕಿಸಿದ್ದಾನೆ ಎಂದು ತಿಳಿದು ಬಂದಿದೆ.
ಮಹಿಳೆ ಈ ಘಟನೆಯನ್ನು ಮತ್ತು ಆತನ ಕೈಯನ್ನು ನೋಡಿದ್ದು ಈ ಸಂಧರ್ಭ ಮಹಿಳೆ ಜೋರಾಗಿ ಕಿರುಚಿಕೊಂಡಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆ ಸುಳ್ಯಠಾಣೆಗೆ ದೂರು ನೀಡಿದ್ದಾರೆ.