ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಕಾಯರತೋಡಿ ಭಾಗದಲ್ಲಿ ಶಂಕಿತ ಹುಚ್ಚು ನಾಯಿಯೊಂದು ಕಾಣಿಸಿಕೊಂಡಿದ್ದು ಜನರು,ವಿದ್ಯಾರ್ಥಿಗಳು ಆತಂಕದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗಾಂಧಿನಗರದ ಕೆಲವು ಬೀದಿ ನಾಯಿಗಳಿಗೆ ಈ ಹುಚ್ಚು ನಾಯಿ ಕಚ್ಚಿದ್ದು ಇನ್ನಷ್ಟು ಹುಚ್ಚು ನಾಯಿಗಳು ಕಾಣಿಸಿಕೊಳ್ಳಲಿದೆ.ಸುಳ್ಯ ನಗರ ಪಂಚಾಯತ್ ಈ ಬಗ್ಗೆ ಗಮನ ಹರಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.