ಚೀನಾದಲ್ಲಿಜೂನಿಯರ್ ಕೊರೊನೊ ಎಂದು ಕರೆಯಲ್ಪಡುವ ಸೋಂಕು ಎಚ್‌ಎಂಪಿವಿ ಹಬ್ಬುತ್ತಿರುವ ಆತಂಕದ ನಡುವೆ ಕರ್ನಾಟಕದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಂಟು ತಿಂಗಳ ಮಗುವಿನಲ್ಲಿ ಶಂಕಿತ ಸೋಂಕಿನ ಲಕ್ಷಣಗಳು ಪತ್ತೆಯಾಗಿದೆ.
ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.