ಟ್ರ್ಯಾಕ್ಟರ್ ಗೆ ಬೈಕೊಂದು ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.
ಮಹಮದ್ ಆಸೀಫ್ (12 ) ಮಮ್ತಾಜ್ (38 )ಶಾಖೀರ್ ಹುಸೇನ್ (48 ) ಮೃತರು. ಮೃತರು ಮಧುಗಿರಿ ತಾಲ್ಲೂಕಿನ ಪುರವರದ ಗುಡ್ಡೇನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಮೂವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಗುದ್ದಿ ಭೀಕರ ಅಪಘಾತ ಸಂಭವಿಸಿದೆ ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.