ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.