ಬಿಜೆಪಿ ಯುವ ಮೋರ್ಚಾ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ನಿವಾಸಿ 32 ವರ್ಷದ ಜಾಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ.ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಬಳಿಕ ಆರೋಪಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಇದೀಗ ಅಲ್ಲಿಯೂ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.