ಸುಳ್ಯ ನಗರದ ಸೋಣಂಗೇರಿ-ಗುತ್ತಿಗಾರು ರಸ್ತೆಯ ಮಿತ್ತಮಜಲು ಬಳಿ ಬೈಕ್ -ಪಿಕಪ್ ಅಪಘಾತ ಸಂಭವಿಸಿದ ಘಟನೆ ಭಾನುವಾರ ಸಂಜೆ ವರದಿಯಾಗಿದೆ. ಸೋಣಂಗೇರಿ ಕಡೆಯಿಂದ ದುಗಲಡ್ಕ ಕಡೆಗೆ ಹೋಗುವ ಪಿಕಪ್ ಹಾಗೂ ದುಗಲಡ್ಕ ಕಡೆಯಿಂದ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡಿದೆ.ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.