ಬೆಳ್ಳಾರೆ ಪೇಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ರಾಡ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.
ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆದ್ದಾರೆ ಎಂದು ದೂರಲಾಗಿದೆ.
ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಯಾಳು ಯುವಕನನ್ನು ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.