ಚಂಡಮಾರುತ ಹಿನ್ನೆಲೆ, ಇಂದಿನಿಂದ ಜನವರಿ 16 ರವರೆಗೆ ಕರ್ನಾಟಕ ಸೇರಿ ದೇಶಾದ್ಯಂತ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.