ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಪ್ರಾರಂಭಗೊಂಡಿದ್ದು ಜ.21 ರವರೆಗೆ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.
ರಾತ್ರಿ ಪೇಟೆಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತು
ಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ ಗಂಟೆ 12.00 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ,ಪಲ್ಲಕ್ಕಿ ಉತ್ಸವ,ವಸಂತ ಕಟ್ಟೆ ಪೂಜೆ,ನೃತ್ಯ ಬಲಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.
ಜ.19 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ ಗಂಟೆ 12.00 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ
ಕಟ್ಟೆ ಪೂಜೆ, ವ್ಯಾಘ್ರಚಾಮುಂಡಿ ದೈವದ ಭಂಡಾರ ಬರುವುದು.
ಬಳಿಕ ಬ್ರಹ್ಮರಥೋತ್ಸವ,ಪೆರುವಾಜೆ ಬೆಡಿ ನಡೆಯಲಿದೆ.
ರಾತ್ರಿ ಗಂಟೆ 10.30 ಕ್ಕೆ ಮಹಾಪೂಜೆ,ಶಯನೋತ್ಸವ,ಕವಾಟ ಬಂಧನ ನಡೆಯಲಿದೆ ಜ.20 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಕವಾಟೋದ್ಘಾಟನೆ,ಶ್ರೀ ದೇವರಿಗೆ ಕಲಶಾಭಿಷೇಕ,ಪಂಚಾಮೃತಾಭಿಷೇಕ,ಸೀಯಾಳಾಭಿಷೇಕ,ಮಹಾ ಪೂಜೆ ಪ್ರಸಾದ ವಿತರಣೆ ನಡೆಯಲಿದೆ.
ಮಧ್ಯಾಹ್ನ ಗಂಟೆ 12.00 ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋನ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ,ಅವಕೃತ ಸ್ನಾನ,ಧ್ವಜಾವರೋಹಣ,ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ,ಅವಕೃತ
ಸ್ನಾನ,ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ನಂತರ ಉಳ್ಳಾಕುಲು,ಮೈಷಂತಾಯ,ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರ ತೆಗೆಯುವುದು.
ಜ.21 ರಂದು ಬೆಳಿಗ್ಗೆ ಗಂಟೆ 7.00 ರಿಂದ ಮಹಾಗಣಪತಿ ಹೋಮ,ಕಲಶಪೂಜೆ ನಡೆಯಲಿರುವುದು.
ಬೆಳಿಗ್ಗೆ ಗಂಟೆ 6.00 ಕ್ಕೆ ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ,ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12 ರಿಂದ ಶ್ರೀ ದೇವರಿಗೆ ಸಂಪ್ರೋಕ್ಷಣೆ,ಕಲಶಾಭಿಷೇಕ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ ನಡೆಯಲಿದೆ.
ನಂತರ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 7.00 ಕ್ಕೆ ಶ್ರೀ ಕಲ್ಲುರ್ಟಿ, ಕಲ್ಕುಡ ದೈವದ ನೇಮ ನಡೆಯಲಿದೆ.
ಪ್ರತೀ ದಿನ ವಿವಿಧ ಭಜನಾ ಮಂಡಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ.18 ರಂದು ರಾತ್ರಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ “ಭಾರತವರ್ಷಿಣಿ” ನಡೆಯಲಿದೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top