ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ : ರಮಾನಾಥ ರೈ

ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ಸಾಧ್ಯವಾಗದ ಸಂದರ್ಭದಲ್ಲಿ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ ಬೆಳ್ಳಿಹಬ್ಬದ ಸವಿನೆನಪಿಗಾಗಿ 28 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ 3 ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ. ಸಿ. ಜಯರಾಮರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕ್ರತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಗ್ರಾ. ಪಂ. ಉಪಾಧ್ಯಕ್ಷೆ ಚಿತ್ರಕುಮಾರಿ ಪಾಲಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ,ಶೀತಲ್ ಯು.ಕೆ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್‌.ಗಂಗಾಧರ, ಎಂ.ಜಿ.ಎಂ. ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲುರವರು ಶುಭಹಾರೈಸಿದರು.
ಶಾಲೆಗೆ ಕೊಡುಗೆ ನೀಡಿದ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ರನ್ನು ಸನ್ಮಾನಿಸಲಾಯಿತು. ನಿರ್ದೇಶಕರನ್ನು ಗೌರವಿಸಲಾಯಿತು. ಶಾಲೆಗೆ ಇಂಟರ್ ಲಾಕ್ ಅಳವಡಿಕೆಗೆ ರೂ.25 ಸಾವಿರ ದೇಣಿಗೆ ನೀಡಿದ ಡಾ.ಡಿ.ವಿ.ಲೀಲಾಧರ್ ಹಾಗೂ ಹುಲ್ಲು ಹಾಸು ಅಳವಡಿಸಿದ ಲತಾ ಕುದ್ರಾಜೆಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಮೋಹನ್‌ ರಾಂ ಸುಳ್ಳಿ, ನಿರ್ದೇಶಕರುಗಳಾದ ಮಾಜಿ ಅಧ್ಯಕ್ಷರುಗಳಾದ ಜಾಕೆ ಸದಾನಂದ, ಕೆ.ಸಿ.ನಾರಾಯಣ ಗೌಡ, ಕೆ.ಸಿ. ಸದಾನಂದ, ದಿನೇಶ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ.ಕೆ., ನವೀನ್ ಕುಮಾ‌ರ್ ಜೆ.ವಿ., ಶೈಲೇಶ್ ಅಂಬೆಕಲ್ಲು ಶ್ರೀಮತಿ ಜಯಲಲಿತಾ ಕೆ.ಎಸ್., ಲತಾ ಎಸ್. ಮಾವಜಿ, ನಳಿನಿ ಸೂರಯ್ಯ, ಉಬರಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ, ಮೊದಲಾದವರಿದ್ದರು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷರಾದ ಮೋಹನ್‌ರಾಂ ಸುಳ್ಳಿ ಸ್ವಾಗತಿಸಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.ದಿನೇಶ್ ಮಡಪ್ಪಾಡಿ ವಂದಿಸಿದರು.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top