ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂರು ವರ್ಷ ಪೂರೈಸಿದ್ದು ಖಾಸಗಿ ಶಾಲೆಗೂ ಮೀರಿಸಿದ ಅಭಿವೃದ್ದಿ ಕಾಮಾಗಾರಿಗಳು ನಡೆದಿದ್ದು ಈ ಕಾಮಗಾರಿಗಳ ಉದ್ಘಾಟನೆ ಮತ್ತ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಹಿರಿಯ. ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಜ.24 ಮತ್ತು 25 ರಂದು ನಡೆಯಲಿದೆ ಎಂದು ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎವಿ ತೀರ್ಥರಾಮ ಹೇಳಿದ್ದಾರೆ ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜ.24 ರಂದು ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 9.30 ಅದ್ಧೂರಿಯ ಮೆರವಣಿಗೆ ನಡೆಯಲಿದೆ, ಮೆರವಣಿಗೆಗೆ ಸೈಂಟ್ ಮೇರಿಸ್ ಇಂಡಸ್ರ್ರೀಸ್ ಮಾಲಕ ಜೋಸೆಪ್ ಕುರಿಯನ್ ಚಾಲನೆ ನೀಡಲಿದ್ದಾರೆ, ಬಳಿಕ ನೂತನ ದ್ವಾರದ ಉದ್ಘಾಟನೆ ನಡೆಯಲಿದ್ದು, ನಿವೃತ ಎ ಎಸ್ ಐ ಕೃಷ್ಣಯ್ಯ ಕಾಣಿಕೆ ಹಾಗೂ, ಶಿವಾಜಿ ಪ್ರೆಂಡ್ಸ್ ಅಧ್ಯಕ್ಷ ವಿನಯಕುಮಾರ ಕಲ್ಲುಪಣೆ ಉದ್ಘಾಟಿಸಲಿದ್ದಾರೆ, ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ದ್ವಜಾರೋಹಣ ನೆರವೇರಿಸಲಿದ್ದಾರೆ, ಉದ್ಯಾನವನದ ಉದ್ಘಾಟನೆಯನ್ನು ನಿವೃತ ಬ್ಯಾಂಕ್ ಅಧಿಕಾರಿ ರಮೇಶ್ ಮೂರ್ತಿ ಕೇರ, ಉದ್ಯಮಿ ಸೀತರಾಮ ಹಲ್ದಡ್ಕ ನೆರವೇರಿಸಲಿದ್ದಾರೆ. ಬಳಿಕ ನೂತನ ಕಾಮಗಾರಿಗಳಾದ ಶತಮಾನೋತ್ಸವ ಸ್ಮಾರಕ ಸಭಾಭವನ, ನೂತನ ರಂಗಮಂದಿರ, ನೂತನ ಕೊಠಡಿಗಳು, ನವೀಕೃತ ಕೊಠಡಿಗಳ ಉದ್ಘಾಟನೆ ನಡೆಯಲಿದೆ, ಉದ್ಘಾಟಕರಾಗಿ
ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್, ದ.ಕ ಉಸ್ತುವಾರಿ, ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್, ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಸಂಸದ ಜಗ್ಗೇಶ್, ದರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯ, ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಎಸ್ ಅಂಗಾರ ಭಾಗವಹಿಸಲಿದ್ದಾರೆ.ಬಳಿಕ ಸಭಾಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ, ವಹಿಸಲಿದ್ದಾರೆ, ಸಭಾ ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಮಧುಬಂಗಾರಪ್ಪ ಎಸ್ ಉದ್ಘಾಟಿಸಲಿದ್ದಾರೆ, ಎಸ್ ಎಲ್ ಬೋಜೇಗೌಢ, ಐವನ್ ಡಿಸೋಜ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಇದರ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕದಷ ಜಯಾನಂದ ಪಟ್ಟೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಉಪಸ್ಥಿತರಿರಲಿದ್ದಾರೆ, ಮುಖ್ಯ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿ ಅದ್ಯಕ್ಷ ಸದಾನಂದ ಮಾವಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮ ತುಳು ನಾಟಕ ನಡೆಯಲಿದೆ.
ಜ. 25 ರಂದು ಹಿರಿಯ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ.ಇದರ ಅದ್ಯಕ್ಷತೆಯನ್ನು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿವಿ ವಹಿಸಲಿದ್ದಾರೆ,ದೇವಚಳ್ಳ ಗ್ರಾ ಪಂ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬಾಳೆತೋಟ ಕಾರ್ಯಕದರಮವನ್ನು ಉದ್ಘಾಟಿಸಲಿದ್ದಾರೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ ಆರ್ ಗಂಗಾಧರ್ ಆಶಯ ನುಡಿ ಮಾತನಾಡಲಿದ್ದಾರೆ ಅಥಿತಿಗಳಾಗಿ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ
ಸಂಜೆ ಗಂಟೆ 7 ರಿಂದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ ವಿ ತೀರ್ಥರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲೆಯಲ್ಲಿ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸುವ ಕಾರ್ಯಕ್ರಮವಿದ್ದು ಮಾಜೀ ಸಂಸದ ನಳೀನ್ ಕುಮಾರ್ ಕಟೀಲ್ ಸನ್ಮಾನ ನೆರವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ .ಕೆ ವಿ ರೇಣುಕಾಪ್ರಸಾದ್ ಉಪಸ್ಥಿತರಿರಲಿದ್ದಾರೆ. ಅತಿಥಿಗಳಾಗಿ ಮುಳಿಯ ಕೇಶವ ಭಟ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಸ್ಟಿಯಲ್ಲಿ, ಶಾಲಾ ಮುಖ್ಯೋಪದ್ಯಾಯರಾದ ಶ್ರೀಧರ್ ಗೌಡ, ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ ವಿ, ಆರ್ಥಿಕ ಸಮಿತಿ ಸಂಚಾಲಕ ರಾಧಾಕೃಷ್ಣ ಶ್ರೀ ಕಟೀಲ್, ಕಾರ್ಯಕ್ರಮ ಸಂಯೋಜನ ಸಮಿತಿಯ ಮುಖ್ಯಸ್ಥ ಗೋಪಿನಾಥ್ ಮೆತ್ತಡ್ಕ, ವೇದಿಕೆ ಸಮಿತಿ ಸಂಚಾಲಕ ಜಯಂತ ತಳೂರು, ರಾಜಗೋಪಾಲ ಅಂಭೆಕಲ್ಲು ಇತರರು ಉಪಸ್ಥಿತರಿದ್ದರು.
ಜ.24 ಮತ್ತು 25ರಂದು ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ : ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಹೇಳಿಕೆ
