ಅರಂತೋಡು : ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೇಟಿ

ದ.ಕ. ಜಿಲ್ಲಾ ಪಂಚಾಯತ್ ನ ನೂತನ ಉಪಕಾರ್ಯದರ್ಶಿ ಶ ಜಯಲಕ್ಷ್ಮಿ ಅವರು ಗುರುವಾರ ಅರಂತೋಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿನ ನಲ್ಲಿ ದಾಖಲೆಗಳನ್ನು ಪರಿಶೀಲಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ.ಅ.ಅ., ಸಿಬ್ಬಂದಿಗಳ ಜೊತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ನಂತರ ಗ್ರಾಮ ಪಂಚಾಯತ್ ಜಿಮ್ ಕೇಂದ್ರ, ಅಮೃತ ಸಭಾಂಗಣ, ಘನ ತ್ಯಾಜ್ಯ ಘಟಕ ಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಸಹಾಯಕ ನಿರ್ದೇಶಕರಾದ ರವಿಚಂದ್ರ, ತಾಂತ್ರಿಕ ಸಂಯೋಜಕರಾದ ಅಶ್ವಿನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್‌,ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top