ಹೊಸದಿಗಂತ ಪತ್ರಿಕೆಯ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ (ಜ.26) ನಿಧನರಾದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಅವರು ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗೆ ಗುರುವಪ್ಪ ಬಾಳೆಪುಣಿ ಪುರಸ್ಕೃತರಾಗಿದ್ದಾರೆ.
ಕಿತ್ತಳೆ ಮಾರಿ ಶಾಲೆ ಕಟ್ಟಿದ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದವರು ಗುರುವಪ್ಪ ಬಾಳೆಪುಣಿ ಅವರು. 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ





































































