ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಕಾರ್ಯಕ್ರಮಗಳ ನಿರೂಪಣೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅನುಶ್ರೀ ಕನ್ನಡ ಕಿರುತೆರೆ ಲೋಕದಲ್ಲಿ ಸಖತ್ ಜನಪ್ರಿಯತೆ ಪಡೆದಿದ್ದಾರೆ. ನಿರೂಪಕಿ ಮಾತ್ರವಲ್ಲದೇ ನಟಿಯಾಗಿರುವ ಅನುಶ್ರೀ ಹಲವು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಅನುಶ್ರೀ ಅವರು ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಜನ್ಮದಿನದ ಸಂಭ್ರಮ
