ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ.25 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಭಾರತದಲ್ಲಿ ವಾರ್ಷಿಕವಾಗಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಯಾದ ಕು. ವಂಶಿಕ ಎಸ್ ಪಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎನ್ಎಸ್ಎಸ್ ವಿದ್ಯಾರ್ಥಿಯಾದ ಸುಜ್ಯಶ್ರೀ ಸಾಹೋ ಕ್ಷಯ ರೋಗ ನಿರ್ಮೂಲನಾ ಪ್ರತಿಜ್ಞಾವಿಧಿಯನ್ನು ಬೋಧಿಸಿ, ವೈಶಾಲಿ ಪಿ ಜೆ, ಪ್ರಸನ್ನ ಬಿ ಎಸ್, ರಾಹುಲ್ ರಾಜನ್ ಹಾಗು ದೀಪ್ತಿ ಧರ್ಮರಾಜ್ ಪ್ರಾರ್ಥಿಸಿ, ರಕ್ಷಿತಾ ಬಿ ಸ್ವಾಗತಿಸಿ, ರೋಹನ್ ಎಲ್ ಕೆ ವಂದಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top