ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾರಣೀಕ ದೈವ ಶ್ರೀ ಪಾಷಾಣಮೂರ್ತಿ ಅಮ್ಮನವರ ಕಾಲಾವಧಿ ಕೋಲ ಜನವರಿ 28ರಂದು ದೈವಸ್ಥಾನದಲ್ಲಿ ನಡೆಯಿತು.
ಜನವರಿ 27ರಂದು ರಾತ್ರಿ ಭಂಡಾರ ತೆಗೆಯಲಾಯಿತು. ಜನವರಿ 28ರಂದು ಶ್ರೀ ಪಾಷಾಣಮೂರ್ತಿ ಅಮ್ಮನವರ ಕೋಲ ನಡೆಯಿತು. ನಂತರ ಪ್ರಸಾದ ವಿತರಣೆ ನಡೆದು ಹರಕೆ ಸಮರ್ಪಣೆ ನಡೆಯಿತು.ಬಳಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು,ಮಾಜಿ ಅಧ್ಯಕ್ಷರು,ಸದಸ್ಯರು,ಜೀರ್ಣೊದ್ದಾರ ಸಮಿತಿಯವರು,ಸಿಬ್ಬಂದಿಗಳು ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.
ತೊಡಿಕಾನ : ಪಾಷಾಣಮೂರ್ತಿ ಅಮ್ಮನವರ ಕಾಲಾವಧಿ ಕೋಲ
