ಪೆರಾಜೆ : ಶಾಲೆಗೆ ಬೆಂಚ್ ಡೆಸ್ಕ್ ಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ ವಿವಿಧಡೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಅದರಲ್ಲಿ ಒಂದಾದ ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಕರ ಕೊರತೆ ಇರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಗೌರವ ಶಿಕ್ಷಕರ ಒದಗಿಸುವ ಮೂಲಕ ಮತ್ತು ಶಾಲಾ ಕಟ್ಟಡ ರಚನೆ, ಆಟದ ಮೈದಾನ, , ಶುದ್ಧ ಕುಡಿಯುವ ನೀರಿನ ಪೂರೈಕೆ, ಶಾಲಾ ಕಟ್ಟಡ ದುರಸ್ತಿ ಕ್ರೀಡಾ ಹಾಗೂ ಬೋಧನ ಸಾಮಗ್ರಿ ಪೂರೈಕೆ ಮತ್ತು ಡೆಸ್ಕ್ ಬೆಂಚುಗಳ ಒದಗಣೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರಂತೆ ಮಡಿಕೇರಿ ತಾಲೂಕಿನ ಸಂಪಾಜೆ ವಲಯದ ಪೆರಾಜೆ ಕಾರ್ಯಕ್ಷೇತ್ರದ ಕುಂಬಳ ಚೇರಿ ಶಾಲೆಗೆ 10 ಬೆಂಚ್ ಡೆಸ್ಕ್ ಗಳನ್ನು ವಿತರಣೆ ಮಾಡಲಾಗುತ್ತಿದ್ದು ದಿನಾಂಕ 30/01/2025 ರಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲೆಯ ಸಹ ಶಿಕ್ಷಕರು, ಗ್ರಾಮಪಂಚಾಯಿತಿ ಅಧ್ಯಕ್ಷರು,SDMC ಅಧ್ಯಕ್ಷರು, ಹಾಗೂ ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು,ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿ. ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top