January 2025

ಮೊಬೈಲ್ ನಲ್ಲಿ ರೀಲ್ಸ್ ನೋಡುವ ವಿಚಾರ ಗಂಡ ಹೆಂಡತಿಗೆ ಜಗಳ,ಹೆಂಡತಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆ

ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (೨೭ವರ್ಷ)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ.ಪತಿ ರಾಜೇಂದ್ರ(೪೦) ಟೈಲ್ಸ್ ಕೆಲಸ ಮಾಡುವವರಾಗಿದ್ದು ಪರಿವಾರಕಾನ ದಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಮಕ್ಕಳು ವೈಷ್ಣವಿ(೮ ವರ್ಷ) ಸೆಂಟ್‌ ಜೋಸೆಪ್‌ ಶಾಲೆ ೨ನೇ ತರಗತಿ ವಿದ್ಯಾರ್ಥಿನಿ. ಇನ್ನೊಬ್ಬಾಕೆ ೨ ವರ್ಷ ಪ್ರಾಯದ ಅನುಷ್ಕಾ ಅಂಗನವಾಡಿಗೆ ಹೋಗುತ್ತಿದ್ದರು.ಕಳೆದ ಒಂದು ವಾರದ […]

ಮೊಬೈಲ್ ನಲ್ಲಿ ರೀಲ್ಸ್ ನೋಡುವ ವಿಚಾರ ಗಂಡ ಹೆಂಡತಿಗೆ ಜಗಳ,ಹೆಂಡತಿ ಇಬ್ಬರು ಮಕ್ಕಳೊಂದಿಗೆ ನಾಪತ್ತೆ Read More »

ರಾಷ್ಟ್ರ ಮಟ್ಟದ ಪಾತ್ರಾಭಿನಯದಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ,ವಿದ್ಯಾರ್ಥಿಗಳಿಗೆ ಸುಳ್ಯ ಪೇಟೆಯಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಗೌರವಾರ್ಪಣೆ

ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ (NPEP) ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ್ವಿತೀಯ ಸ್ಥಾನ ಪಡೆದು ವಿಶೇಷ ಸಾಧನೆ ಮಾಡಿದ್ದು, ಜ.13ರಂದು ವಿದ್ಯಾರ್ಥಿಗಳು ಸುಳ್ಯಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.ಸಮೂಹ ಮಾಧ್ಯಮಗಳ ಸುರಕ್ಷಿತ ಬಳಕೆ ಎಂಬ ವಿಷಯದ ಮೇಲೆ ಆಂಗ್ಲ ಭಾಷೆಯಲ್ಲಿ ಪ್ರಸ್ತುತ ಪಡೆಸಿದ ಪಾತ್ರಾಭಿನಯವನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಇವರು ರಚಿಸಿ ನಿರ್ದೇಶನ ಮಾಡಿದ್ದರು.

ರಾಷ್ಟ್ರ ಮಟ್ಟದ ಪಾತ್ರಾಭಿನಯದಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ,ವಿದ್ಯಾರ್ಥಿಗಳಿಗೆ ಸುಳ್ಯ ಪೇಟೆಯಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಗೌರವಾರ್ಪಣೆ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ನಡೆಯುತ್ತಿದೆ ಶ್ರದ್ದಾ ಭಕ್ತಿಯಿಂದ ಧನುಪೂಜೆ,ನಾಳೆ ಈ ವರ್ಷದ ಕೊನೆಯ ಧನುಪೂಜೆ,ಹೆಚ್ಚಿನ ಸಂಖ್ಯೆಯ ಭಕ್ತರ ನಿರೀಕ್ಷೆ

ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುರ್ ಮಾಸ ಪ್ರಯುಕ್ತ ಡಿ.16ರಿಂದ ಧನು ಪೂಜೆ ಆರಂಭಗೊಂಡಿದ್ದು ಜ.14ರಂದು ಸಮಾಪ್ತಿಯಾಗಲಿದೆ.ಮಂಗಳವಾರ ಈ ವರ್ಷದ ಕೊನೆಯ ಧನುಪೂಜೆ ಆಗಿರುವ ಹಿನ್ನಲೆ ಮತ್ತು ಸರಕಾರಿ ರಜೆ ಇರುವ ಹಿನ್ನಲೆಯಲ್ಲಿ ಈ ದಿನ ಹೆಚ್ಚಿನ ಭಕ್ತಾಧಿಗಳು ಧನುಪೂಜೆಯಲ್ಲಿ ಭಾಗವಹಿಸುವ ‌ನಿರೀಕ್ಷೆ ಇದೆ.ದೇವಳದಲ್ಲಿ ಜೀರ್ಣೋದ್ಧಾರ ಕಾಮಗಾರಿಗಳು ಯಶಸ್ವಿಯಾಗಿ ಪೂರೈಸಿದ್ದು, ಕಳೆದ 2017ರ ಮಾರ್ಚ್ 1ರಿಂದ 11ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿದೆ. ಶ್ರೀ ಕ್ಷೇತ್ರದ ಸವಾರ್‌ಂಗೀಣ ಅಭಿವೃದ್ಧಿಗೆ ಪೂರಕವಾಗಿ

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ನಡೆಯುತ್ತಿದೆ ಶ್ರದ್ದಾ ಭಕ್ತಿಯಿಂದ ಧನುಪೂಜೆ,ನಾಳೆ ಈ ವರ್ಷದ ಕೊನೆಯ ಧನುಪೂಜೆ,ಹೆಚ್ಚಿನ ಸಂಖ್ಯೆಯ ಭಕ್ತರ ನಿರೀಕ್ಷೆ Read More »

ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳ ವಿರುದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಖಂಡನೆ

ಬೆಂಗಳೂರಿನಲ್ಲಿ ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ರಾಕ್ಷಸಿ ಪ್ರವೃತ್ತಿ ಹೊಂದಿದವರು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಂದು ಹೇಳಿದ್ದಾರೆ.ಜಮೀರ್ ಅಹ್ಮದ ಅವರೇ ಇದು ನಿಮ್ಮ ಕ್ಷೇತದಲ್ಲಾಗಿರುವ ಘಟನೆ ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಜಮೀರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.ಹಸುಗಳ ಕೆಚ್ಚಲು ಕೊಯ್ದು ನೀಚರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.ಒಂದು ವೇಳೆ ಈ ಪ್ರಕರಣದಲ್ಲಿ ಬೇಜವಾಬ್ದಾರಿ ಪ್ರದರ್ಶಿಸಿದರೆ ರಾಜ್ಯಾದ್ಯಂತ ಶ್ರೀರಾಮಸೇನೆ ಜಮೀರ್

ನಾಲ್ಕು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳ ವಿರುದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಖಂಡನೆ Read More »

ಇಂದು ಸಾರ್ವಜನಿಕ ಭೇಟಿಗೆ ಶಾಸಕರು ಲಭ್ಯರಿಲ್ಲ

ಇಂದು (ಜ.13 ) ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಸುಳ್ಯ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಬ್ಯರಿರುವುದಿಲ್ಲ. ಕಡಬ ಕಚೇರಿಯಲ್ಲ್ಕಿಯೂ ನಿಗದಿತ ದಿನದಂದು ಶಾಸಕರು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.ಭೇಟಿಗೆ ಮುಂದಿನ ದಿನಾಂಕವನ್ನು ತಿಳಿಸಲಾಗುವುದು.

ಇಂದು ಸಾರ್ವಜನಿಕ ಭೇಟಿಗೆ ಶಾಸಕರು ಲಭ್ಯರಿಲ್ಲ Read More »

ತೊಡಿಕಾನ : ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಹಿನ್ನಲೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ತೊಡಿಕಾನ ಗ್ರಾಮದ ಪಡ್ಪು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ನಡೆಯುತ್ತಿದ್ದು ದೇಣಿಗೆ ಸಂಗ್ರಹ ಕಾರ್ಯಕ್ಕೆ ಜ.12 ದೈವಸ್ಥಾನದಲ್ಲಿ ಪ್ರಾರ್ಥಿಸಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಬಾಳೆಕಜೆ,ಗೌರವ ಸಲಹೆಗಾರರಾದಸಂತೋಷ್ ಕುತ್ತಮೊಟ್ಟೆ,ಕೆ ಕೆ ನಾರಾಯಣ ಕುಂಟುಕಾಡು ಇತರ ಪದಾಧಿಕಾರಿಗಳು,ಬೈಲುವಾರು ಸಮಿತಿಯವರು ಉಪಸ್ಥಿತರಿದ್ದರು.ದೈವಸ್ಥಾನದ ಜೀರ್ಣೊದ್ದಾರ ಕಾರ್ಯಕ್ಕೆ ಊರ ಹಾಗೂ ಪರ ಊರಿನ ದಾನಿಗಳ ಸಹಕಾರ ಅಗತ್ಯವಿದ್ದು ಸಹಕಾರ ನೀಡಬೇಕೆಂದು ಸಮಿತಿಯರು ವಿನಂತಿಸಿಕೊಂಡಿದ್ದಾರೆ. ಬೈಲುವಾರು ಸಮಿತಿಗಳ ಮೂಲಕ ಮನೆವಂತಿಗೆ ಸಂಗ್ರಹ ನಡೆಯುತ್ತಿದೆ.

ತೊಡಿಕಾನ : ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಹಿನ್ನಲೆ ದೇಣಿಗೆ ಸಂಗ್ರಹಕ್ಕೆ ಚಾಲನೆ Read More »

ಪಿಕಪ್ ಬೈಕ್ ಅಪಘಾತ ಬೈಕ್ ಸವಾರ ಗಂಭೀರ

ಸುಳ್ಯ ನಗರದ ಸೋಣಂಗೇರಿ-ಗುತ್ತಿಗಾರು ರಸ್ತೆಯ ಮಿತ್ತಮಜಲು ಬಳಿ ಬೈಕ್‌ -ಪಿಕಪ್ ಅಪಘಾತ ಸಂಭವಿಸಿದ ಘಟನೆ ಭಾನುವಾರ ಸಂಜೆ ವರದಿಯಾಗಿದೆ. ಸೋಣಂಗೇರಿ ಕಡೆಯಿಂದ ದುಗಲಡ್ಕ ಕಡೆಗೆ ಹೋಗುವ ಪಿಕಪ್‌ ಹಾಗೂ ದುಗಲಡ್ಕ ಕಡೆಯಿಂದ ಬರುತ್ತಿದ್ದ ಬೈಕ್‌ ಪರಸ್ಪರ ಡಿಕ್ಕಿ ಹೊಡೆದುಕೊಂಡಿದೆ.ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಪಿಕಪ್ ಬೈಕ್ ಅಪಘಾತ ಬೈಕ್ ಸವಾರ ಗಂಭೀರ Read More »

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಬಂದರು ಪಾನೆಕಲ್ಲು ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.ಪ್ರಾರ್ಥನಾ ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕ ವಿದ್ವಾನ್ ಸುದರ್ಶನ್ ಎಂ. ಎಲ್. ಭಟ್ ಅವರ ಶಿಷ್ಯೆ. ವಿದುಷಿ ಡಿಂಪಲ್ ಶಿವರಾಜ್ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.ಬಂದರು ಸರಕಾರಿ ಹಿರಿಯ ಪ್ರಾಥಮಿಕ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ Read More »

ಬೆಳ್ಳಾರೆಯಲ್ಲಿ ಇಬ್ಬರಿಂದ ರಾತ್ರಿ ಯುವಕನ ಬೈಕ್ ತಡೆದು ಹಲ್ಲೆ

ಬೆಳ್ಳಾರೆ ಪೇಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮೇಲೆ ರಾಡ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆದ್ದಾರೆ ಎಂದು ದೂರಲಾಗಿದೆ.ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಗಾಯಾಳು ಯುವಕನನ್ನು ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳಾರೆಯಲ್ಲಿ ಇಬ್ಬರಿಂದ ರಾತ್ರಿ ಯುವಕನ ಬೈಕ್ ತಡೆದು ಹಲ್ಲೆ Read More »

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಜ್ಞಾನಶ್ರೀ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಬಂದರು ಗ್ರಾಮದ ಪಾನೆಕಲ್ಲಿನ ಜ್ಞಾನಶ್ರೀ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ. ಜ್ಞಾನಶ್ರೀ ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕ ವಿದ್ವಾನ್ ಸುದರ್ಶನ್ ಎಂ. ಎಲ್. ಭಟ್ ಅವರ ಶಿಷ್ಯೆ. ವಿದುಷಿ ಡಿಂಪಲ್ ಶಿವರಾಜ್ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾಳೆ.ಬಂದರು ಪೆರ್ಲ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಜ್ಞಾನಶ್ರೀ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ Read More »

error: Content is protected !!
Scroll to Top