ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ಆ್ಯಂಬುಲೆನ್ಸ್‌ನಲ್ಲಿ ಅಂತ್ಯಕ್ರಿಯೆ ಗಾಗಿ ಊರಿಗೆ ಕರೆತರುತ್ತಿದ್ದಾಗ ಮೃತಪಟ್ಟ ವ್ಯಕ್ತಿ ಎದ್ದು ಕುಳಿತು ಅಚ್ಚರಿ ಮೂಡಿಸಿದ ಘಟನೆ ಭಾನುವಾರ ಹಾವೇರಿ ಜಿಲ್ಲೆಯ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.
ಬಂಕಾಪುರದ ಮಂಜುನಾಥ ನಗರದ ಬಿಷಪ್ಪ ಅಶೋಕ ಗುಡಿಮನಿ (45) ಮತ್ತೆ ಬದುಕುಳಿದ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬಿಷ್ಟಪ್ಪ ಉಸಿರಾಡದೆ ಇರುವುದನ್ನು ಗಮನಿಸಿದ
ಆಸ್ಪತ್ರೆಯ ವೈದ್ಯರು, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಳಿಕ ಬಿಷ್ಣಪ್ಪ ಪತ್ನಿ ಶೀಲಾ, ಸಂಬಂಧಿಕರ ಜತೆಗೆ ಆ್ಯಂಬುಲೆನ್ಸ್‌ನಲ್ಲಿ ಬಂಕಾಪುರಕ್ಕೆ ಕರೆದುಕೊಂಡು ಬರುವಾಗ, ದಾರಿ ಮಧ್ಯೆ ‘ಡಾಬಾ ಬಂತು ನೋಡು ಊಟ ಮಾಡುತ್ತೀಯಾ’ ಎಂದು ಪತ್ನಿ ಗೋಳಾಡಿ ಕಣ್ಣೀರಿಡುತ್ತಿದ್ದಂತೆ ಮೃತರಾಗಿದ್ದಾರೆ ಎಂದು ಭಾವಿಸಿದ್ದ ವ್ಯಕ್ತಿ ಉಸಿರು ಬಿಟ್ಟಿದ್ದರಿಂದ ದೇಹ ಅಲ್ಲಾಡಿದೆ. ಆಗ ಗಾಬರಿಯಾದ ಕುಟುಂಬಸ್ಥರು, ವಾಪಾಸ್ తిగాంచి ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ತಪಾಸಣೆ ಮಾಡಿದ ವೈದ್ಯರು ಆತ ಬದುಕಿರುವುದನ್ನು ದೃಢಪಡಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ!
