2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಫೆ.15 ರೊಳಗೆ ಅರ್ಜಿ ಸಲ್ಲಿಸಬೇಕು. ಈ ವಿಶೇಷ ನೋಂದಣಿಗೆ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.
ಯುವ ನಿಧಿಗೆ ಇಂದೇ ಅರ್ಜಿ ಸಲ್ಲಿಸಿ,ಇಲ್ಲಿದೆ ಹೆಚ್ಚಿನ ಮಾಹಿತಿ
