ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಸ್ಪಂಧಿಸದೆ ಫೆ 12ರಂದು ಮೃತಪಟ್ಟಿದ್ದಾಳೆ.
ಫೆ 6 ರಂದು ಈಕೆ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು
