ಸುಳ್ಯ ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ಅಸೌಖ್ಯದಿಂದ ಫೆ.17ರಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.ಇಂದು ಅವರ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ
