ಪ್ರಸಾದಮ್ ಮತ್ತು ಸ್ವದೇಶಿ ದರ್ಶನ್ ಯೋಜನೆಯಡಿ ದೇವಾಲಯಗಳ ಅಭಿವೃದ್ಧಿ ಮತ್ತು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಉಪ್ಪಿನಂಗಡಿ, ತೊಡಿಕಾನ ಮತ್ತು ಪುತ್ತೂರು ದೇವಾಲಯಗಳ ಅಭಿವೃದ್ಧಿಗೆ ಒಟ್ಟು 150 ಕೋಟಿ ರೂಪಾಯಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದ್ದು, ಇದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯನ್ನು ಅಮೂಲಾಗ್ರ ಅಭಿವೃದ್ಧಿಗೆ ಒಳಪಡಿಸಲು ಸಾಧ್ಯವಾಗುವುದೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಫೆ.17ರಂದು ಸಂಕಲ್ಪಿತ ಅಭಿವೃದ್ಧಿ ಕಾರ್ಯಗಳ ನೀಲ ಸಕಾಶೆಯನ್ನು ಪರಿಶೀಲಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಉಪ್ಪಿನಂಗಡಿ, ತೊಡಿಕಾನ ಮತ್ತು ಪುತ್ತೂರು ದೇವಾಲಯಗಳ ಅಭಿವೃದ್ಧಿಗೆ ಒಟ್ಟು 150 ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಕೆ
