ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ಸರ್ಕಾರದ ಅನುಮೋದನೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ ಎಂದು ಸಂಸದ ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ. […]
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ಸರ್ಕಾರದ ಅನುಮೋದನೆ Read More »