ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ.
ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್, ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಅಧಿಕಾರ ಹಸ್ತಾಂತರವನ್ನು ಮಾಡಿದರು.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ನೇಮಕ
