ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್ ಸವಾರ.
ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ , ಬೈಕ್ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು , ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ, ಪಿಕಪ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಪಿಕಪ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
