ಕಟೀಲು ದುರ್ಗಾಪರಮೇಶ್ವರಿ ದೇವಳಕ್ಕೆ , ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ

ಪ್ರಸಿದ್ದ ದುರ್ಗಾ ದೇವಾಲಯವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗನೊಂದಿಗೆ ಭೇಟಿ ನೀಡಿದ್ರು.
ಈ ವೇಳೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಪ್ರಸಾದ,ಶೇಷವಸ್ತ್ರ ನೀಡಿ ಗೌರವಿಸಲಾಯಿತು.
ಕಾಂತಾರ ಚಾಪ್ಟರ್ 2 ಚಿತ್ರೀಕರಣ ಭಾಗಶಃ ಮುಗಿದಿರೋ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದು ಚಿತ್ರದ ಯಶಸ್ಸಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು ಚಿತ್ರೀಕರಣ ಕೊನೆಯ ಹಂತದಲ್ಲಿದೆ ಅಕ್ಟೋಬರ್ 2 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ಮಾಡಲಾಗಿದೆ ಈ ಹಿನ್ನೆಲೆ ಕುಟುಂಬ ಸಮೇತರಾಗಿ ಟೆಂಪಲ್ ರನ್ಸ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಡಿಕೆಶಿ ವಾರ್ನಿಂಗ್ ವಿಚಾರ ಪ್ರಸ್ತಾಪಿಸಿದಾಗ ಚಿತ್ರೋತ್ಸವಕ್ಕೆ ಆಹ್ವಾನ ಬಂದ ಬಗ್ಗೆ ಪ್ರತಿಕ್ರಿಯಿಸಿದ್ದು ನಾನು ಚಿತ್ರದ ಶೂಟಿಂಗ್ ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top