ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ, ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಹೊಸ ಯೋಜನೆಗಳೇ ಇಲ್ಲ. ನಕ್ಸಲ್ ಪ್ರಭಾವಿತ ಗ್ರಾಮಗಳಿಗೆ ಸಹಾಯ ಪ್ಯಾಕೇಜ್ ನೀಡುವ ಬದಲು ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ.
ಈ ಬಜೆಟ್ ಕನ್ನಡಿಗರ ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಇದು ಮತಬ್ಯಾಂಕ್ ರಾಜಕಾರಣಕ್ಕೆ ಅನುಕೂಲವಾಗುವಂತೆಯೇ ರೂಪಿಸಲಾಗಿದೆ. ರಾಜ್ಯದ ಸಾರ್ವಜನಿಕ ಬಂಡವಾಳವನ್ನು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಟ್ಟಿದ್ದು, ಕನ್ನಡಿಗರ ಹಿತದೃಷ್ಠಿಯಿಂದ ಯಾವುದೇ ಪ್ರಗತಿಪರ ಯೋಜನೆಗಳನ್ನು ಈ ಬಜೆಟ್ ಒಳಗೊಂಡಿಲ್ಲ. ರಾಜ್ಯದಲ್ಲಿ ಸಮಗ್ರ ಪ್ರಗತಿಗೆ ಮುನ್ನಡೆಸುವ ಬದಲು, ಮತಬ್ಯಾಂಕ್ ರಾಜಕೀಯವನ್ನೇ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ
