ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ.
ಆರೋಪಿ ಪವನ್ ಮಾರ್ಚ್ 8ರಂದು ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಆರೋಪಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಾಲಕಿಯ ಮನೆಯವರು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ
ಅತ್ಯಾಚಾರಕ್ಕೆ ಯತ್ನಿಸಿದಾತನ ಬಂಧನ
