ತುಮಕೂರು: ಮನುಷ್ಯರಿಗೆ ವಾಮಚಾರ ಮಾಡುವ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ.ಆದರೆ ದೇವರಿಗೆ ವಾಮಾಚಾರ ಮಾಡಿದ
ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ಮಾ. 11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ.
ಹಟ್ನಾ ಗ್ರಾಮ ಸೇರಿದಂತೆ 32 ಗ್ರಾಮಗಳ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು (ಮಾ. 12ರ ಬುಧವಾರ) ಮುಂಜಾನೆ ಪೂಜೆ ಸಲ್ಲಿಸಲು ದೇವಸ್ಥಾನದಕ್ಕೆ ಅರ್ಚಕರು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ವಾಮಾಚಾರಕ್ಕೆ ಬಳಸಿದ ಕೆಲ ವಸ್ತುಗಳು ಪತ್ತೆಯಾಗಿದ್ದು, ಇನ್ನೂ ಕೆಲ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಕಂಡು ಆಕ್ರೋಶ ವ್ಯಕ್ತಪಡಿಸಿದ ಭಕ್ತಾಧಿಗಳು, ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ಜಿಲ್ಲೆಯ ತಿಪಟೂರಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.
ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು
