ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.13 ರಂದು ಬೆಳಿಗ್ಗೆ ನಡೆದಿದೆ.
ಸುಬ್ರಹ್ಮಣ್ಯದಿಂದ ಮಂಗಳೂರುಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್ ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಂಭೀರ ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಶಾಲಾ ಮಕ್ಕಳಿಗೆ ಗಾಯ
