ಸುಳ್ಯದಲ್ಲಿ ಮೊದಲ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು ಸುಳ್ಯ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತೆಲೆಯಲ್ಲಿ ಕಾಲ ಕಳೆಯುವಂತಾಗಿದೆ.ನಿನ್ನೆ ರಾತ್ರಿ ಒಂಬತ್ತು ಗಂಟೆಗೆ ಕೈ ಕೊಟ್ಟ ವಿದ್ಯುತ್ ಇನ್ನು ಬಂದಿಲ್ಲ.
ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ 33/11 ಕೆ.ವಿ. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಲೈನ್ ನಿಂದ ಸುಳ್ಮ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ
ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ,ಕತ್ತಲೆಯಲ್ಲಿ ಸುಳ್ಯ ಮತ್ತು ಗ್ರಾಮೀಣ ಪ್ರದೇಶಗಳು
