ಮುಸ್ಲಿಂ ಯುವಕನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ 19 ಮಂದಿ ಹಿಂದು ಕಾರ್ಯಕರ್ತರ ಖುಲಾಸೆ

ಹಿಂದೂ ಯುವತಿಯೊಂದಿಗಿದ್ದ ಎಂದು ಮುಸ್ಲಿಂ ಯುವಕನನ್ನು ಕಾರಿನಿಂದ ಎಳದು ಹಾಕಿ ಹಲ್ಲೆಗೈದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 19ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದ. ಈತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಈ ಘಟನೆ 2015ರ ಆಗಸ್ಟ್ 28ರಂದು ನಡೆದಿತ್ತು.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಸಹೋದ್ಯೋಗಿ ಯುವತಿ 2ಸಾವಿರ ಹಣ ಬೇಕೆಂದು ಕೇಳಿದ್ದಕ್ಕೆ ಶಾಕೀ‌ರ್ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ತೆರಳಿ ಹಣ ಕೊಡುತ್ತಿದ್ದ. ಈ ವೇಳೆ ನಾಲ್ಕು ಬೈಕ್‌ಗಳಲ್ಲಿ ಬಂದ ಯುವಕರ ತಂಡ ಕಾರಿಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಆತನನ್ನು ಕಾರಿನಿಂದ ಎಳೆದು ಹಾಕಿ 10ರಿಂದ 12 ಮಂದಿ ಆರೋಪಿಗಳು ಸೇರಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಬಳಿಕ ಆತನ ಬಳಿಯಿದ್ದ ಎಟಿಎಂ ಕಾರ್ಡ್, ಎರಡು ಸಾವಿರ ನಗದು, ಮೊಬೈಲ್ ಕಿತ್ತುಕೊಂಡು ಹೋಗಿರುವುದಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top