ರಾಜ್ಯದಲ್ಲಿ ದಲಿತ ಸಮುದಾಯದ ಕಾಲನಿ ಅಭಿವೃದ್ಧಿ ಕುರಿತು ಸಮೀಕ್ಷೆ ನಡೆಸಲು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಸರಕಾರ ಹೆಲಿಕಾಪ್ಟರ್ ಕೊಡಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಅವರು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ ಸಾಮಾನ್ಯ ಚರ್ಚೆಯಲ್ಲಿ ಮಾತನಾಡಿದರು. ಸುಳ್ಯ ತಾಲೂಕು ಸೇರಿದಂತೆ ರಾಜ್ಯದ ಬಹುತೇಕ ದಲಿತ ಸಮುದಾಯದ ಕಾಲನಿಗಳು ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಸರಕಾರ ಸಮರ್ಪಕ ಸರ್ವೇ ನಡೆಸಬೇಕು. ಜೊತೆಗೆ, ಸಮೀಕ್ಷೆಗಾಗಿ ಮಹದೇವಪ್ಪ ಅವರಿಗೆ ಸರಕಾರವೇ ಹೆಲಿಕಾಪ್ಟರ್ ಕೊಡಿಸಬೇಕು ಎಂದು ಬೇಡಿಕೆ ಇಟ್ಟರು.
ಹೆಲಿಕಾಪ್ಟರ್ ತೆಗೆದು ಕೊಡಲು ಶಾಸಕಿ ಭಾಗೀರಥಿ ರಾಜ್ಯ ಸರಕಾರಕ್ಕೆ ಒತ್ತಾಯ
