ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ!

ಬೆಂಗಳೂರು: ರಾಜ್ಯ ಸರಕಾರ ಮೂಲಭೂತ ವಸ್ತುಗಳ ಮತ್ತು ಭೂಲಭೂತ ಸೌಕರ್ಯಗಳ ಬೆಲೆ ಏರಿಸಿರುವುದರಿಂದ ರಾಜ್ಯದ ಜನತೆ ಕಂಗೆಟ್ಟಿದ್ದು ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.
ದರಗಳು ಹಂತ ಹಂತವಾಗಿ ಏರಿಕೆಯಾಗಲಿವೆ. 2025-26ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳವಾಗಲಿದೆ. 2026-27ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 35 ಪೈಸೆ, 2027-28ರ ಅವಧಿಯಲ್ಲಿ ಪ್ರತಿ ಯೂನಿಟ್‌ಗೆ 34 ಪೈಸೆ ಹೆಚ್ಚಳವಾಗಲಿದೆ. ಈ ಹೆಚ್ಚಳದಿಂದಾಗಿ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 8519 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹವಾಗುವ ನಿರೀಕ್ಷೆಯಿದೆ. ಆದರೆ, ಈಗಾಗಲೇ ವಿದ್ಯುತ್ ಸಂಸ್ಥೆಗಳಿಗೆ ಸುಮಾರು 4659 ಕೋಟಿ ರೂಪಾಯಿಗಳಷ್ಟು ಪಿಂಚಣಿ ಮತ್ತು ಗ್ರಾಚ್ಯುಟಿ ಬಾಕಿ ಇದೆ ಎಂದು ವರದಿಯಾಗಿದೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top