ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪದಿಂದ ಮಾ.21ರಂದು ವರದಿಯಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸಕಲೇಶಪುರ ಮೂಲದ ಮದನ್ ಎಂದು ಗುರುತಿಸಲಾಗಿದೆ. ಓಂತ್ರಡ್ಕ ಶಾಲೆಯ ಸಮೀಪ ತನ್ನ ಕಾರು ನಿಲ್ಲಿಸಿ ವಿಷ ಸೇವಿಸಿ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ ಎನ್ನಲಾಗಿದೆ. ಈ ಬೆನ್ನಲ್ಲೇ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕಳುಹಿಸಿಕೊಟ್ಟಿದ್ದಾರೆ.
ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
