ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ಬಿ ಸಿ ರೋಡ್ ನಲ್ಲಿ ನಡೆದಿದೆ. ನಾವೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೇ ರಿಕ್ಷಾ ಚಾಲಕನಾಗಿರುವ ಮೋನು ಎಂಬಾತನೆ ಕಿರುಕುಳ ನೀಡಿದಾತ.
ಮಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಪುತ್ತೂರಿನಿಂದ ಬಿ ಸಿ ರೋಡ್ ಬರುವ ವೇಳೆ ಮೋನು ಪಕ್ಕದ ಸೀಟಿನಲ್ಲಿ ಕೂತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕೂಡಲೇ ಯುವತಿ ಇತರರ ಗಮನಕ್ಕೆ ತಂದಿದ್ದಾಳೆ. ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ
