ಯುವಕ ನೇಣು ಬಿಗಿದು ಆತ್ಮಹತ್ಯೆ

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೌಕ್ರಾಡಿ ಗ್ರಾಮದಲ್ಲಿ ಏ.2ರಂದು ಸಂಜೆ ನಡೆದಿದೆ. ಆಲಂಪಾಡಿ ನಿವಾಸಿ ಅಶ್ರಫ್(30) ಮೃತ ಯುವಕ. ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ ಮನೆಯವರೊಂದಿಗೆ ಪದೇ ಪದೇ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನೆ ಮಂದಿ ಪ್ರತ್ಯೇಕವಾಗಿ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಈ ಯುವಕ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇದರಿಂದ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎನ್ನಲಾಗಿದೆ.
ಏ.2ರಂದು ಸಂಜೆ ಮನೆಯ ಸಿಟೌಟ್‌ನಲ್ಲಿದ್ದ ಕಬ್ಬಿಣದ ಪೈಪುಗೆ ಅಂಗಿಯ ಒಂದು ಬದಿಯನ್ನು ಕಟ್ಟಿ ಅದರ ಇನ್ನೊಂದು ಬದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಮೃತ ಯುವಕನ ತಂದೆ ಖಾಸೀಂ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಅಶ್ರಫ್ ತಂದೆ, ತಾಯಿ, ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳನ್ನು ಅಗಲಿದ್ದಾರೆ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top