ಪುತ್ತೂರು : ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿ, ಮತ್ತೆ ಮತ್ತೆ ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ ಘಟನೆ ತಡವಾಗಿ ವರದಿಯಾಗಿದೆ.
ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆರೋಪಿ ಆಟೋ ಚಾಲಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದಾಳೆ. 2024 ರ ಆಗಸ್ಟ್ ತಿಂಗಳಿನಲ್ಲಿ ಕಾಲೇಜಿಗೆ ರಜೆ ಇದ್ದುದರಿಂದ ಆಕೆ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಬಾಲಕಿಗೆ ಮುಖತಃ ಪರಿಚಯವಿದ್ದ ಪುತ್ತೂರು ತಾಲೂಕಿನ ಕಟ್ಟತ್ತಡ್ಕ ನಿವಾಸಿ, ಆಟೋ ಚಾಲಕ ಮಂಜುನಾಥ್ ಎಂಬಾತ ನೀರು ಬೇಕು ಎಂದು ಕೇಳಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಅಪ್ರಾಪ್ತ ಬಾಲಕಿಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ!
